Contact : +91 9663 755 105 / sremramakunja@gmail.com

ಶ್ರೀರಾಮಕುಂಜೇಶ್ವರ ಶಾಲೆಯ 2020-21ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ರಾಮಕುಂಜದ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2020-21ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನ ಸಮಾರಂಭವು ಶಾಲಾ ಸಭಾಂಗಣದಲ್ಲಿ ಜರಗಿತು.

ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಪ್ರಾಧ್ಯಾಪಕರಾದ ಸದಾಶಿವ ಭಟ್ ಅವರು ಶಾಲಾ ಹಂತದಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಲ್ಲಿ ಮುಂದಿನ ನಾಯಕತ್ವ ಬೆಳವಣಿಗೆಗಳಿಗೆ ಸಹಾಯಕವಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ನಂತರ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಮಾತನಾಡಿ ವಿದ್ಯಾರ್ಥಿಗಳು ತಮಗೆ ದೊರಕಿದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಕಠಿಣ ಶ್ರಮವಹಿಸಿ ಅಧ್ಯಯನ ಶೀಲರಾದರೆ ನಿಮ್ಮ ಗುರಿಯನ್ನು ಸಾಧಿಸಬಹುದು ಎಂದು ತಿಳಿಸಿದರು.

ಶ್ರೀರಾ.ಪ.ಪೂ.ಕಾಳೇಜಿನ ಪ್ರಾಂಶುಪಾಲರಾದ ಸತೀಶ್ ಭಟ್ ಮಾತನಾಡಿ ಶೈಕ್ಷಣಿಕ ಚಟುವಟಿಕೆ ಹಾಗೂ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸೌಲಭ್ಯಗಳ ಸಮಗ್ರ ಮಾಹಿತಿ ನೀಡಿದರು.

ಚುನಾಯಿತರಾದ ನೂತನ ನಾಯಕ ವೇಣುಗೋಪಾಲ್ ಕೆ, ಉಪನಾಯಕಿ ಭೂಮಿಕ ಕೆ ಹಾಗೂ ಇತರ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿದಿಯನ್ನುü ಶಿಕ್ಷಕ ರಾಧಾಕೃಷ್ಣ ಬೋಧಿಸಿದರು.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಆಧುನಿಕ ಮತದಾನ ಯಂತ್ರದ ಮಾದರಿಯನ್ನು ತಯಾರಿಸಿ ಚುನಾವಣೆ ನಡೆಸಲಾಯಿತು.

ವೇದಿಕೆಯಲ್ಲಿ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪ್ರದೀಪ್ ರೈ ಮನವಳಿಕೆ, ಉಪಧ್ಯಾಕ್ಷರಾದ ಬಾಬು ಪೂಜಾರಿ, ಶೈಕ್ಷಣಿಕ ಸಲಹೆಗಾರ ರವೀಂದ್ರ ದರ್ಬೆ, ಶಿಕ್ಷಕರು ಹಾಗೂ ಸಿಬಂದಿ ವರ್ಗದವರು ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿ ಆನಂದ.ಎಸ್.ಟಿ ಸ್ವಾಗತಿಸಿ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್ ವಂದಿಸಿದರು. ವಿದ್ಯಾರ್ಥಿನಿ ಅಂಜಲಿ ನಿರೂಪಿಸಿದರು.