Contact : +91 9663 755 105 / sremramakunja@gmail.com

72ನೇ ಸ್ವಾತಂತ್ರೋತ್ಸವ ದಿನಾಚರಣೆ

ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ವತಿಯಿಂದ 72ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತ ವಾಯುಸೇನೆಯ ನಿವೃತ್ತ ಜೂನಿಯರ್ ವಾರೆಂಟ್ ಆಫೀಸರ್ ಕೃಷ್ಣಪ್ರಸಾದ್ ಭಟ್ ಧ್ವಜಾರೋಹಣ ಗೈದರು. ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಇಂದಿನ ಯುವ ಪೀಳಿಗೆಯವರು ಸೇನೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯು ಭಾರತೀಯ ಸೇನೆಗೆ ಸೇರಿಕೊಳ್ಳುವ ಆಶಾಭಾವನೆ ಇಟ್ಟುಕೊಳ್ಳಬೇಕು. ವಿದ್ಯಾರ್ಥಿಗಳು ಶಾಲಾ ಜೀವನದಲ್ಲಿ ಎನ್‍ಸಿ ಹಾಗೂ ಸ್ಕೌಟ್ಸ್ ಗೈಡ್ಸ್ ಘಟಕದಲ್ಲಿ ಸೇರಿಕೊಳ್ಳಬೇಕು. ಇದರಿಂದಾಗಿ ಭಾರತೀಯ ಸೇನೆಗೆ ಸೇರಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳು ರಾಷ್ಟ್ರ ಭಕ್ತಿಯನ್ನು ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯವನ್ನು ಉಳಿಸುವ ಜವಾಬ್ದರಿ ನಮ್ಮೆಲ್ಲರ ಮುಂದಿದೆ. ತನ್ನ ದೇಶವನ್ನು ಪ್ರೀತಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯವಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಾದ ಕೈವಲ್ಯ, ದೀಪಕ್ ಹೆಬ್ಬಾರ್, ಜಿ.ಜೆ.ಸಾತ್ವಿಕ್ ಹಾಗೂ ಸಹ ಶಿಕ್ಷಕಿ ಕುಮಾರಿ ವಿಜೇತ 72ನೇ ಸ್ವಾತಂತ್ರೋತ್ಸವದ ಕುರಿತಾಗಿ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಸ್ವಾತಂತ್ರೋತ್ಸವದ ಅಂಗವಾಗಿ ನಡೆದ ವಿವಿಧ ಸಾಂಸ್ಕøತಿಕ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪ್ರದೀಪ್ ರೈ ಮನವಳಿಕೆ, ಆಡಳಿತಾಧಿಕಾರಿ ಆನಂದ್.ಎಸ್.ಟಿ ಹಾಗೂ ಶಿಕ್ಷಕರು, ಸಂಸ್ಥೆಯ ಸಿಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಸಾತ್ವಿಕ್.ಜಿ.ರೈ ಸ್ವಾಗತಿಸಿ, ಅನುಶ್ರೀ ವಂದಿಸಿ, ನವೀನ ಕೃಷ್ಣ ನಿರೂಪಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.