Contact : +91 9663 755 105 / sremramakunja@gmail.com

75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಹಿರಿಯ ನಿವೃತ್ತ ಶಿಕ್ಷಕರಾದ ಶ್ರೀಯುತ ಚಂದ್ರಹಾಸ ರೈ ಮುಖ್ಯ ಅತಿಥಿಗಳಾಗಿ ಧ್ವಜಾರೋಹಣಗೈದು, ರಾಷ್ಟ್ರಧ್ವಜದ ಮಹತ್ವದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಕೆ ಸೇಸಪ್ಪ ರೈಯವರು ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರರಕ್ಷಣೆಯು ವಿದ್ಯಾರ್ಥಿ ದೆಸೆಯಲ್ಲಿ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆಸಲಾದ ಸಾಂಸ್ಕøತಿಕ ಹಾಗೂ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಾಥಮಿಕ ಶಾಲಾ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಗೋಲ್ಡನ್ ಆ್ಯರೋ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಯುತ ಬಿ ಎಲ್ ಜನಾರ್ಧನ, ಆಡಳಿತಾಧಿಕಾರಿ ಶ್ರೀಯುತ ಆನಂದ ಎಸ್ ಟಿ, ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀಯುತ ರಮೇಶ ರೈ, ತಾಂತ್ರಿಕ ಸಹಾಯಕ ಶ್ರೀಯುತ ಜಯೇಂದ್ರ ಬಂದ್ಯಾನ್ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿ ಬಿಂಬಿಸುವ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಜರುಗಿತು. ಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು ಎನ್ ಸ್ವಾಗತಿಸಿದರು. ಹತ್ತನೇಯ ತರಗತಿ ವಿದ್ಯಾರ್ಥಿಗಳಾದ ಕುಮಾರಿ ರಕ್ಷಿತಾ ಶೆಟ್ಟಿ ಹಾಗೂ ಕುಮಾರಿ ಶ್ರಾವ್ಯ ಮತ್ತು ಸಹಶಿಕ್ಷಕಿ ಶ್ರೀಮತಿ ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಲೋಹಿತಾ ವಂದನಾರ್ಪಣೆಗೈದರು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಲಾಯಿತು.