Contact : +91 9663 755 105 / sremramakunja@gmail.com

ಶಿಕ್ಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 2-10-2022 ಆದಿತ್ಯವಾರದಂದು ಶಿಕ್ಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮಾವೇಶ ವು ಅದ್ದೂರಿಯಾಗಿ ನಡೆಯಿತು .ಈ ಸಮಾವೇಶದಲ್ಲಿ 1995 ರಿಂದ 2021 ನೇ ಶೈಕ್ಷಣಿಕ ವರ್ಷದವರೆಗೆ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಸುಮಾರು 400 ಕ್ಕಿಂತಲೂ ಹೆಚ್ಚು ಹಿರಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು .ಸಮಾವೇಶದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಯಾಗಿರುವ ಶ್ರೀ ಕೆ. ಸೇಸಪ್ಪ ರೈ ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀ ನಾರಾಯಣ ಭಟ್ .ಟಿ , ಶಾಲೆಯ ಸ್ಥಾಪಕ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಆರತಿ .ಎ .ನಿಕಟಪೂರ್ವ ಮುಖ್ಯೋಪಾಧ್ಯಾಯರಾದ ಶ್ರೀ ಆನಂದ್ ಆರ್ ,ರಾಮಕುಂಜ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ್ ಕೆ ಭಾಗವಹಿಸಿದ್ದರು .ಶಾಲಾ ಆಡಳಿತಾಧಿಕಾರಿ ಶ್ರೀ ಆನಂದ್ ಎಸ್ ಟಿ .ಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ಗಾಯತ್ರಿ ಯುಎನ್ ,ಶ್ರೀಮತಿ ಲೋಹಿತ ,ವಿದ್ಯಾರ್ಥಿನಿಲಯದ ವ್ಯವಸ್ಥಾಪಕರಾದ ಶ್ರೀ ರಮೇಶ್ ರೈ ,ತಾಂತ್ರಿಕ ಸಲಹೆಗಾರರಾದ ಶ್ರೀ ಜಯೇಂದ್ರ ಉಪಸ್ಥಿತರಿದ್ದರು .ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗೌರವಿಸಲಾಯಿತು .ಹಾಗೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿರುವ ಶ್ರೀ ದಾಸಪ್ಪ ಇವರನ್ನು ಸನ್ಮಾನಿಸಲಾಯಿತು . ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗಾಯತ್ರಿ ಯುಎನ್ ಸ್ವಾಗತಿಸಿದರು .ನಿಲಯ ವ್ಯವಸ್ಥಾಪಕರಾದ ಶ್ರೀ ರಮೇಶ್ ರೈ ಧನ್ಯವಾದಗೈದರು .ಶಿಕ್ಷಕರಾದ ಶ್ರೀ ಕಿಶೋರ್ ಕುಮಾರ್ ಬಿ ಮತ್ತು ಶ್ರೀ ಹರೀಶ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು .ಮೊದಲಿಗೆ ಸಮಾವೇಶಕ್ಕೆ ಆಗಮಿಸಿದ ಹಿರಿಯ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ನಡೆಯಿತು .ನಂತರ ಹಿರಿಯ ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನಾ ಆಟಗಳನ್ನು ಏರ್ಪಡಿಸಲಾಗಿತ್ತು .ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು .ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು .ನಂತರ ವಿದ್ಯಾರ್ಥಿ ಸಂಘದ ರಚನೆಯ ಬಗ್ಗೆ ವಿದ್ಯಾರ್ಥಿಗಳಿಂದ ಅಭಿಪ್ರಾಯ ಸಂಗ್ರಹಿಸಲಾಯಿತು .ಹಿರಿಯ ವಿದ್ಯಾರ್ಥಿಗಳು ಕಲಿತ ವಿದ್ಯಾ ಸಂಸ್ಥೆಯ ಹಳೆಯ ನೆನಪುಗಳನ್ನು ಮೆಲುಕು ಹಾಕಿ ಸಂಭ್ರಮಿಸಿದರು .ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಉಪಾಹಾರ ಮತ್ತು ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು .ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯುವಂತೆ ಎಲ್ಲಾ ಶಿಕ್ಷಕರು,ಸಿಬ್ಬಂದಿ ವರ್ಗದವರು ಸಹಕರಿಸಿದರು .