Contact : +91 9663 755 105 / sremramakunja@gmail.com

ಗಾಂಧೀ ಜಯಂತಿ ಆಚರಣೆ

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ರಾಮಕುಂಜ ಇಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜನ್ಮದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಜೊತೆಗೆ ಭಾರತದ ಎರಡನೇ ಪ್ರಧಾನಮಂತ್ರಿ ಶ್ರೀಯುತ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನವನ್ನು ಹಾಗೂ ಅವರ ಆದರ್ಶಗಳನ್ನು ಸ್ಮರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಕೆ ಸೇಸಪ್ಪ ರೈ ಯವರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟದ ಸನ್ನಿವೇಶಗಳು ನಮಗೆಲ್ಲ ಮಾದರಿ, ನಾವೆಲ್ಲರೂ ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಪ್ರಾಥಮಿಕ ಶಾಲಾ ಸಹಶಿಕ್ಷಕಿ ಶ್ರೀಮತಿ ವನಿತಾ ಇವರು ಗಾಂಧೀಜಿಯವರ ಜೀವನ ಆದರ್ಶಗಳ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲೋಹಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗಾಯತ್ರೀ ಯು ಎನ್ ವಂದನಾರ್ಪಣೆಗೈದರು.