Latest News

Kannada Rajyothsava at Ramakunja English Medium School
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ರಾಮಕುಂಜ ಇಲ್ಲಿ 65 ನೇ ಕನ್ನಡ ರಾಜ್ಯೋತ್ಸವವನನ್ನು ಸಾಂಕೇತಿಕವಾಗಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಸೇಸಪ್ಪ ರೈ ಇವರು ಕನ್ನಡ ಮಾತೆ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಕನ್ನಡ ರಾಜ್ಯೋತ್ಸವ ಆಚರಣೆಯ ಮಹತ್ವ, ಕನ್ನಡ ನಾಡಿನ ಇತಿಹಾಸದ ಬಗ್ಗೆ ತಿಳಿಸಿದರು. ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಶ್ರೀಯುತ ರವೀಂದ್ರ ದರ್ಬೆ ಇವರು ಸಂದರ್ಭೋಚಿತವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗಾಯತ್ರಿ ಯು. ಎನ್ ಸ್ವಾಗತಿಸಿ, ಸಹಶಿಕ್ಷಕ ಶ್ರೀಯುತ ಕಿಶೋರ್ ವಂದನಾರ್ಪಣೆಗೈದರು. ಅಧ್ಯಾಪಕ ವೃಂದದವರಿಂದ ಕನ್ನಡ ನಾಡಗೀತೆಯನ್ನು ಸುಶ್ರಾವ್ಯವಾಗಿ ಹಾಡಲಾಯಿತು. ಸಂಸ್ಥೆಯ ಎಲ್ಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.