Contact : +91 9663 755 105 / sremramakunja@gmail.com

70ನೇ ಗಣರಾಜ್ಯೋತ್ಸವ ದಿನಾಚರಣೆ

ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಮತ್ತು ಪ್ರಾಥಮಿಕ ಶಾಲೆಯಲ್ಲಿ 70ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ರಕ್ಷಕ ಶಿಕ್ಷಕ ಸಂಘದ ಮಾಜಿ ಸದಸ್ಯರಾದ ಮಹಮ್ಮದ್ ಆಲಿ ಧ್ವಜಾರೋಹಣ ಗೈದರು.ನಂತರ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಮಾತನಾಡಿ ವಿದ್ಯಾರ್ಥಿಗಳಿಗೆ ದೇಶಪ್ರೇಮ ಮತ್ತು ರಾಷ್ಟ್ರೀಯತೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಪ್ರಯತ್ನ ಬಾಲ್ಯದಲ್ಲಿಯೇ ನಡೆಯಬೇಕು. ಹಾಗೂ ವಿವಿಧತೆಯಲ್ಲಿ ಏಕತೆ ಶಕ್ತಿ. ಇದನ್ನು ಗೌರವಿಸಿ ದೇಶ ಕಟ್ಟುವ ನಿರ್ಣಯ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

 

ವಿದ್ಯಾರ್ಥಿಗಳಾದ ಅಂಕುಶ್ ಪ್ರಭು, ಕೈವಲ್ಯ, ಅಖಿಲ್ ಗೌಡ ಹಾಗೂ ವಿದ್ಯಾರ್ಥಿ ನಿಲಯದ ವಾರ್ಡನ್ ರಮ್ಯ.ರೈ 70ನೇ ಗಣರಾಜ್ಯೋತ್ಸವ ಕುರಿತಾಗಿ ವಿಚಾರ ಮಂಡಿಸಿದರು.

 

ವೇದಿಕೆಯಲ್ಲಿ ಆಡಳಿತಾಧಿಕಾರಿ ಆನಂದ್.ಎಸ್.ಟಿ ಶಿಕ್ಷಕರು, ಸಂಸ್ಥೆಯ ಸಿಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಪೋಷಕರು ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್ ಸ್ವಾಗತಿಸಿ, ಸಹಶಿಕ್ಷಕಿ ಭವ್ಯಕುಮಾರಿ ವಂದಿಸಿ, ಸಹಶಿಕ್ಷಕ ವಸಂತ್ ನಿರೂಪಿಸಿದರು. ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.