Contact : +91 9663 755 105 / sremramakunja@gmail.com

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆ ರಾಮಕುಂಜದಲ್ಲಿ ಮಂಗಳೂರಿನ ಅಕ್ಷರ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ ಎಸ್.ಎಸ್.ಎಲ್.ಸಿ ಪರೀಕ್ಷೆ ನಮ್ಮ ಮುಂದಿನ ಭವಿಷ್ಯವನ್ನು ನಿರ್ಧಾರಿಸುತ್ತದೆ. ಪರೀಕ್ಷೆಗೆ ಭಯಪಟ್ಟು ಬರೆಯಲು ಹಿಂದೇಟು ಹಾಕಬಾರದು. ದಿನನಿತ್ಯ ಶ್ರದ್ಧೆಯಿಂದ ಓದಿ ಉತ್ತಮ ಅಂಕ ಗಳಿಸಲು ಸಾಧ್ಯ ಇತ್ತಿಚೇಗೆ ವಿದ್ಯಾರ್ಥಿಗಳು ಅತೀ ಹೆಚ್ಚಾಗಿ ಸಾಮಾಜಿಕ ಜಾಲತಾಣವನ್ನು ಬಳಸುವುದಾಗಿದೆ. ಇದರಿಂದಾಗಿ ಮಕ್ಕಳ ಶಿಕ್ಷಣದಲ್ಲಿ ಪರಿಣಾಮ ಬೀರುತ್ತದೆ. ಈ ಬಗ್ಗೆ ಪೋಷಕರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ನಿಗಾ ವಹಿಸಬೇಕು ಎಂದು ಹೇಳಿದರು.

 

ನಂತರ ಅಕ್ಷರ ಫೌಂಡೇಶನ್‍ನ ರಾಷ್ಟ್ರೀಯ ತರಬೇತುದಾರರಾದ ದೇವಿಪ್ರಸಾದ್ ಕೊಳಂಬೆ, ಸುನಿಲ್ ಅವರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಹಾಗೂ ಪಠ್ಯ ವಿಷಯಗಳ ಕುರಿತು ಮಾಹಿತಿ ಕಾರ್ಯಗಾರ ನಡೆಸಲಾಯಿತು.
ಕಾರ್ಯಕ್ರಮವನ್ನು ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್ ಸ್ವಾಗತಿಸಿ, ಆಡಳಿತಾಧಿಕಾರಿ ಆನಂದ್.ಎಸ್.ಟಿ ವಂದಿಸಿದರು.