Contact : +91 9663 755 105 / sremramakunja@gmail.com

ಪೋಷಕರ ಸಮಾವೇಶ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ‍್ಯಕ್ರಮ

ಶ್ರೀ ರಾಮಕುಂಜೇಶ್ವರ ವೃತ್ತಿಪರ ಶಿಕ್ಷಣ ಅಭಿವೃದ್ಧಿ ಕೇಂದ್ರ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ(ರಿ) ರಾಮಕುಂಜ ಹಾಗೂಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆ ರಾಮಕುಂಜ ಇದರ ವತಿಯಿಂದ 2018-19ನೇ ಸಾಲಿನ ಪೋಷಕರ ಸಮಾವೇಶ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ‍್ಯಕ್ರಮ ಶಾಲಾ ಸಭಾಂಗಣದಲ್ಲಿ ಜರುಗಿತು.

 

ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ ರಾಮಕುಂಜ ಅಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ.ಇ.ಕಲ್ಲೇರಿ ಅಧ್ಯಕ್ಷತೆ ವಹಿಸಿ ಮಾತನಾಡಿ ದ.ಕ.ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮವಾದ ಶಿಕ್ಷಣ ನೀಡುವಲ್ಲಿ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆ ಕೀರ್ತಿಯನ್ನು ಪಡೆದಿದೆ. ಟಿ.ವಿ, ಮೊಬೈಲ್‌ಗಳಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ಪೋಷಕರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು. ತಮ್ಮ ದೈನಂದಿನ ಜೀವನದಲ್ಲಿ ನಿಯಮಗಳು ಅಗತ್ಯ. ವಿದ್ಯಾರ್ಥಿಗಳು ಶ್ರದ್ಧಾ ಭಕ್ತಿಯಿಂದ ಗುರು ಹಿರಿಯರನ್ನು ಗೌರವಿಸಬೇಕು ಎಂದು ಹೇಳಿದರು.

 

ನಂತರ ಕಾರ‍್ಯಕ್ರಮದಲ್ಲಿ ಪೇಜಾವರ ಅಧೋಕ್ಷಜ ಮಠ ಉಡುಪಿ ಶ್ರೀ ಶ್ರಿ ಶ್ರೀ ವಿಶ್ವಪ್ರಸನ್ನ ತೀರ್ಥ ಪಾದಂಗಳವರು ಮಾತನಾಡಿ ಮಕ್ಕಳನ್ನು ಉತ್ತಮ ನಾಗರಿಕ, ಸುಸಂಸ್ಕೃತನ್ನಾಗಿಸುವ ಮಾಡುವ ಕಾರ‍್ಯವನ್ನು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆ ಅಭೂತಪೂರ್ಣ ಸಾಧನೆಗೈದಿದೆ. ವಿದ್ಯಾರ್ಥಿಗಳಿಗೆ ಭಾರತೀಯ ಸನಾತನ ಸಂಸ್ಕೃತಿಯ ಕುರಿತಾಗಿ ಅರಿವುವನ್ನು ಈ ವಿದ್ಯಾಸಂಸ್ಥೆ ಮಾಡುತ್ತಿದೆ. ಮಕ್ಕಳ ಮೇಲೆ ಹೆತ್ತವರಿಗೆ ಮಮತೆ ಸಹಜ. ಆದರೆ, ಸಮಸ್ಯೆಗಳನ್ನು ಕಾಲಕಾಲಕ್ಕೆ ಚರ್ಚಿಸಿಕೊಂಡು ಮಕ್ಕಳ ಶಿಕ್ಷಣದ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.

 

ಇದೇ ಸಂದರ್ಭದಲ್ಲಿ 2017-18 ನೇ ಎಸ್.ಎಸ್.ಎಸ್.ಸಿಯಲ್ಲಿ ಉತ್ತಮ ಅಂಕಗಳಿಸಿದ 54 ಸಾಧಕ ವಿದ್ಯಾರ್ಥಿಗಳಿಗೆ ಸುಮಾರು ಒಂದೂವರೆ ಲಕ್ಷದಷ್ಟು ಪ್ರೋತ್ಸಹಕ ಧನ ನೀಡಲಾಯಿತು. ಸಹಶಿಕ್ಷಕ ಕಿಶೋರ್ ಕುಮಾರ್ ಕಾರ‍್ಯಕ್ರಮವನ್ನು ನಿರೂಪಿಸಿದರು.

 

ಈ ವೇದಿಕೆಯಲ್ಲಿ ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈ, ವಿದ್ಯಾವರ್ಧಕ ಸಭಾ ಕಾರ‍್ಯದರ್ಶಿ ರಾಧಾಕೃಷ್ನ ಕುವೆಚರ್, ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಶುಂಪಾಲ ಸತೀಶ್ ಭಟ್, ಶ್ರೀ ರಾಮಕುಂಜೇಶ್ವರ ಸಂಸ್ಕೃತ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಆನಂದ್ ಭಟ್, ಆಡಳಿತಾಧಿಕಾರಿ ಆನಂದ.ಎಸ್.ಟಿ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ಮ್ಯಾನೇಜರ್ ರಮೇಶ್ ಕುಮಾರ್ ಹಾಗೂ ಶಿಕ್ಷಕರು, ಸಂಸ್ಥೆಯ ಸಿಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು.