Shri Ramakunjeshwara Residential English Medium High School, Ramakunja

Latest News

ವಿದ್ಯಾರ್ಥಿ ಸಂಘ ಉದ್ಘಾಟನೆ

ಶ್ರೀ ರಾಮಕುಂಜ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ವತಿಯಿಂದ 2018-19ರ ಸಾಲಿನ ವಿದ್ಯಾರ್ಥಿ ಸಂಘವನ್ನು ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಲತನ್ .ರೈ ಉದ್ಘಾಟಿಸಿದರು.

ಬಳಿಕ ಮಾತನಾಡಿದವರು ಪ್ರತಿಯೊಬ್ಬ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನಾಯಕತ್ವದ ಗುಣಗಳ ಬಗ್ಗೆ ಅರಿವುವಿರಬೇಕು. ವಿದ್ಯಾರ್ಥಿ ಸಂಘವು ಶಾಲಾ ಜೀವನದಲ್ಲಿ ಅವಿಭಾಜ್ಯ ಅಂಗವಾಗಿ ಕಾರ‍್ಯನಿರ್ವಹಿಸುತ್ತದೆ. ವಿದ್ಯಾರ್ಥಿಗಳು ಸಮಾಜ ಸೇವೆಯ ಕಡೆಗೆ ಹೆಚ್ಚಿನ ಒಲವನ್ನು ತೋರಬೇಕು. ಕೆಟ್ಟ ವಿಚಾರಗಳನ್ನು ಬಿಟ್ಟು, ಒಳ್ಳೆಯ ಆಲೋಚನೆಯ ಕಡೆಗೆ ಗಮನಹರಿಸಬೇಕು. ಯಾವುದೇ ದುಶ್ವಟಗಳಿಗೆ ಬಲಿಯಾಗದೆ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ನಂತರ ಸಂಸ್ಥೆಯ ಕಾರ‍್ಯದರ್ಶಿ ಸೇಸಪ್ಪ ರೈ. ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಪಠ್ಯತೇರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ತುಳುನಾಡಿನ ತುಳು ಸಂಸ್ಕೃತಿ, ಪರಂಪರೆ ಹಾಗೂ ಭಾಷೆಯ ಕುರಿತು ಅಭಿಮಾನ ಇಟ್ಟುಕೊಳ್ಳಬೇಕು. ವಿದ್ಯಾರ್ಥಿಗಳು ತುಳು ನಾಡಿನ ಸಂಪ್ರಾದಯದ ಹಬ್ಬಗಳಲ್ಲಿ ಭಾಗವಹಿಸಿ ಮಹತ್ವವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆಯ ಶಿಕ್ಷಕ ರಾಧಾಕೃಷ್ಣ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ನಾಯಕ ಸ್ವಾತಿಕ್.ಜಿ.ರೈ, ಉಪನಾಯಕ ಸಂಕಲ್ಪ್.ಬಿ.ಆರ್, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್ ಸ್ವಾಗತಿಸಿದರು. ವಿದ್ಯಾರ್ಥಿ ಸ್ಫೂರ್ತಿ ವಂದಿಸಿ, ವಿದ್ಯಾರ್ಥಿ ಜೇಷ್ಮ ಕಾರ‍್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲೆಯ ಮುಖ್ಯಗುರು ಲೋಹಿತ ಹಾಗೂ ಶಿಕ್ಷಕರು, ಸಂಸ್ಥೆಯ ಸಿಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು.