Contact : +91 9663 755 105 / sremramakunja@gmail.com

ಶ್ರೀ ವಿಶ್ವೇಶ್ವರತೀರ್ಥ ಪೇಜಾವರ ಸ್ವಾಮೀಜಿ ಅವರ ಭೇಟಿ

ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ರಾಮಕುಂಜ ಅ.26ರಂದು ಉಡುಪಿಯ ಪೇಜಾವರ ಮಠದ ಶ್ರೀಶ್ರೀಶ್ರೀವಿಶ್ವೇಶ್ವರತೀರ್ಥ ಪೇಜಾವರ ಸ್ವಾಮೀಜಿ ಅವರು ಭೇಟಿ ನೀಡಿದರು. ಈ ವೇಳೆ ಮಾತನಾಡಿದವರು ತನ್ನ ಹುಟ್ಟೂರಲ್ಲೇ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವ ಕನಸು ಶ್ರೀದೇವರ ದಯೆಯಿಂದ ಈಡೇರಿದೆ. ಈ ಸಂಸ್ಥೆಯಲ್ಲಿ ಸಾವಿರಾರು ಮಂದಿ ವಿದ್ಯೆ ಕಲಿತು ಉನ್ನತ ಮಟ್ಟದಲ್ಲಿದ್ದಾರೆ ಎಂದು ಹೇಳಿದರು. ನಂತರ ಶಾಲಾ ವಿದ್ಯಾರ್ಥಿಗಳಿಗೆ ಆರ್ಶೀವಚನ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಶ್ರೀರಾಮಕುಂಜೇಶ್ವರ ವಿದ್ಯಾವರ್ದಕ ಸಭಾದ ಅಧ್ಯಕ್ಷ ಕೃಷ್ಣಮೂರ್ತಿ ಕಲ್ಲೇರಿ, ಶ್ರೀರಾಮಕುಂಜೇಶ್ವರ ವಿದ್ಯಾವರ್ದಕ ಸಭಾದ ಕಾರ್ಯದರ್ಶಿ ರಾಧಕೃಷ್ಣ ಕೆ.ಎಸ್. ಶ್ರೀರಾಮಕುಂಜೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ|ಸಂಕೀರ್ತ್ ಹೆಬ್ಬಾರ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸತೀಶ್ ಭಟ್, ಸಂಸ್ಕøತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ಟಿ.ನಾರಾಯಣ ಭಟ್, ಪ್ರೌಡ ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ಪ್ರಾಥಮಿಕ ಶಾಲಾ ಮುಖ್ಯಗುರು ಲೋಹಿತ, ಆಡಳಿತಾಧಿಕಾರಿ ಆನಂದ್.ಎಸ್.ಟಿ, ವಿದ್ಯಾರ್ಥಿ ನಿಲಯದ ಮ್ಯಾನೇಜರ್ ರಮೇಶ್.ರೈ ಶಿಕ್ಷಕರು ಹಾಗೂ ಸಂಸ್ಥೆಯ ಸಿಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು.