Contact : +91 9663 755 105 / sremramakunja@gmail.com

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ತುಡರ ಪರ್ಬ”

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 05/11/2022 ರಂದು ತುಡರ ಹಬ್ಬವನ್ನು ಆಚರಿಸಲಾಯಿತು. ತುಳುನಾಡಿನಲ್ಲಿ ಹಿರಿಯರು ಆಚರಿಸಿಕೊಂಡು ಬಂದಿರುವ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಕ್ಕಳಿಗೆ ಪಸರಿಸುವ ಉದ್ದೇಶದಿಂದ ಸಾಂಪ್ರದಾಯಿಕ ಆಚರಣೆಗಳನ್ನು ಸಂಸ್ಥೆಯಲ್ಲಿ ಕಳೆದ 15 ವರ್ಷಗಳಿಂದ ನಡೆಸುತ್ತಾ ಬಂದಿದೆ. ಇಂದಿನ ಈ ತುಡರ ಹಬ್ಬ ಕಾರ್ಯಕ್ರಮದಲ್ಲಿ ಕುಂಬ್ರ ದುರ್ಗಾಪ್ರಸಾದ್ ರೈಯವರು ನ್ಯಾಯವಾದಿಗಳು ಪುತ್ತೂರು ಅತ್ಯಾರ್‍ಗಳ ಪೂಜೆಯ ಪ್ರಾತ್ಯಕ್ಷಿಕೆಯೊಂದಿಗೆ, ದೀಪಾವಳಿ ಹಬ್ಬದ ವಿಶೇಷತೆಯನ್ನು, ಮೂರು ದಿನಗಳ ಆಚರಣೆಗಳ ಹಿಂದಿನ ಸತ್ವವನ್ನು ಮನಮುಟ್ಟುವಂತೆ ಮಕ್ಕಳಿಗೆ ತಿಳಿಯಪಡಿಸಿದರು. ಗೋಪೂಜೆಯನ್ನು ನೆರವೇರಿಸಿದ ಶರವೂರು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ದಾಮೋದರ ಗೌಡ ಕಕ್ವೆ ಇವರು ಶುಭ ಹಾರೈಕೆಗಳೊಂದಿಗೆ, ಪೂವರಿ ತುಳು ಪತ್ರಿಕೆಯ ಪ್ರಧಾನ ಸಂಪಾದಕರಾದ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಇವರು ಪ್ರಶಂಶನೀಯ ಮಾತುಗಳನ್ನಾಡಿದರು. ಸಭೆಯಲ್ಲಿ ನೇತ್ರಾವತಿ ತುಳೂಕೂಟದ ಸದಸ್ಯರಾದ ಶ್ರೀ ಗೋಪಾಲ ಶೆಟ್ಟಿ ಕಳೆಂಜ ಇವರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಶ್ರೀ ಕೆ ಸೇಸಪ್ಪ ರೈ ಇವರು ವಹಿಸಿದ್ದರು. ಸಭೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಆನಂದ್ ಎಸ್ ಟಿ, ಪ್ರೌಢಶಾಲಾ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಗಾಯತ್ರಿ ಯು ಎನ್ ಮತ್ತು ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಲೋಹಿತಾ ಎ, ತಾಂತ್ರಿಕ ಸಲಹೆಗಾರರಾದ ಶ್ರೀ ಜಯೇಂದ್ರ ಬಿ ಇವರು ಉಪಸ್ಥಿತರಿದ್ದರು. ಮುಖ್ಯಗುರುಗಳಾದ ಶ್ರೀಮತಿ ಗಾಯತ್ರಿ ಯು ಎನ್ ಸ್ವಾಗತಿಸಿ, ವಿದ್ಯಾರ್ಥಿನಿಲಯದ ವ್ಯವಸ್ಥಾಪಕಾರಾದ ಶ್ರೀ ರಮೇಶ್ ರೈ ಆರ್ ಬಿ ಇವರು ಧನ್ಯವಾದಗೈದರು. ಕಾರ್ಯಕ್ರಮವನ್ನು ಸಹಶಿಕ್ಷಕರಾದ ಶ್ರೀ ಸುಬ್ರಹ್ಮಣ್ಯ ಸಿ ಕೆ ನಿರ್ವಹಿಸಿದರು ಹಾಗೂ ಸಹಶಿಕ್ಷಕಿ ಸರಿತಾ ರಾಮಕುಂಜ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು.