Latest News

ರಾಷ್ಟ್ರೀಯ ಮತದಾರರ ದಿನಾಚರಣೆ
ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ನಡೆಸಲಾಯಿತು. ಶಾಲಾ ಮುಖ್ಯಗುರು ಮಾತನಾಡಿ ಮತದಾನ ನಮ್ಮೆಲ್ಲರ ಹಕ್ಕಾಗಿದೆ. ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮಹತ್ವದ ಜವಾಬ್ದಾರಿ ನಮ್ಮದಾಗಿದೆ. 18 ವರ್ಷಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡು ತಪ್ಪದೇ ಮತ ಚಲಾಯಿಸಬೇಕು. ಮತ ಚಲಾವಣೆಯಿಂದ ಹಿಂದೆ ಸರಿದರೆ ಅಭಿವೃದ್ಧಿಯಿಂದ ಹಿಂದೆ ಸರಿದಂತೆ. ಮತದಾನದಿಂದ ಹಿಂದೆ ಸರಿದರೆ, ತನ್ನ ಜವಾಬ್ದಾರಿಯಿಂದ ದೂರ ಸರಿದಂತೆ. ಜಾಗೃತ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಿದರೆ ದೇಶ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ತಿಳಿಸುತ್ತಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಆಡಳಿತಾಧಿಕಾರಿ ಆನಂದ.ಎಸ್.ಟಿ ಸಹಶಿಕ್ಷಕರು ಹಾಗೂ ಸಂಸ್ಥೆಯ ಸಿಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು.