Latest News

ಬೇಸಿಗೆ ಶಿಬಿರ – ಪ್ರತಿಭಾನ್ವೇಷಣೆ- 2019 ಉದ್ಘಾಟನೆ
ಬೇಸಿಗೆ ಶಿಬಿರ -2019 ‘ಕಲಿಕೆಯ ಕಣಜ’ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮವು ಶ್ರೀರಾಮಕುಂಜೇಶ್ವರ ಆಂ.ಮಾ.ಪ್ರೌಢಶಾಲೆಯಲ್ಲಿ ಜರುಗಿತು. ಉದ್ಘಾಟಿಸಿ ಮಾತಾನಾಡಿದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪ್ರದೀಪ್ ಮನವಳಿಕೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಬೇಸಿಗೆ ಶಿಬಿರ ಶಕ್ತಿ ಕೇಂದವಾಗಿದೆ ಎಂದು ತಿಳಿಸಿದರು.
ನಂತರ ರಾಮಕುಂಜದ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ದ.ಕ.ಜಿ.ಪ.ಹಿ.ಪ್ರಾ.ಶಾಲೆ.ಆತೂರಿನ ಸಹಶಿಕ್ಷಕಿ ವನಿತಾ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಆಡಳಿತಾಧಿಕಾರಿ ಆನಂದ.ಎಸ್.ಟಿ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಸೌಮ್ಯಶ್ರೀ, ಸಂಪನ್ಮೂಲ ವ್ಯಕ್ತಿ ಸುಮನಾ ಕೆರೆಕರೆ, ಶಿಕ್ಷಕರು ಹಾಗೂ ಸಂಸ್ಥೆಯ ಸಿಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಲೋಹಿತ.ಎ ವಂದಿಸಿದರು. ಸಹಶಿಕ್ಷಕ ಕಿಶೋರ್ ಕುಮಾರ್ ನಿರೂಪಿಸಿದರು.