Latest News

ಸ್ವಚ್ಛ ಮನಸ್ಸು, ಸ್ವಚ್ಛ ಭಾರತ ಕಾರ್ಯಾಗಾರ
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಛ ಮನಸ್ಸು, ಸ್ವಚ್ಛ ಭಾರತ ಕಾರ್ಯಾಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿದ್ದ ಮಹೇಶ್ ಪೈ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಮಹತ್ವವನ್ನು ತಿಳಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ ಸ್ವಚ್ಛತಾ ಮಂಥನ ಕೈಪಿಡಿ ನೀಡಿ ಅದರ ಬಗ್ಗೆ ವಿವರಿಸಿದರು.
ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಎಂ.ಆರ್.ಪಿ.ಎಲ್. ಸಂಸ್ಥೆ ಪ್ರಾಯೋಜಕತ್ವ ನೀಡುತ್ತಿದೆ.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಆಡಳಿತಾಧಿಕಾರಿ ಆನಂದ.ಎಸ್.ಟಿ, ಶೈಕ್ಷಣಿಕ ಸಲಹೆಗಾರ ರವೀಂದ್ರ ದರ್ಭೆ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್ ಹಾಗೂ ಕಾರ್ಯಕ್ರಮ ಸಂಯೋಜಕರಾದ ಗೋಪಾಲ್ ರವರು ಉಪಸ್ಥಿತರಿದ್ದರು.