Latest News

ವಿದ್ಯಾರ್ಥಿನಿ ಕು.ಶುಭಪ್ರದಾ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಉಪನಿರ್ದೇಶಕರ ಕಛೇರಿ, ಶಿವಮೊಗ್ಗ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ಅ.22,23 ಹಾಗೂ 24ರಂದು ನಡೆದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿನಿ ಕು.ಶುಭಪ್ರದಾ(10ನೇ) ಭಾಗವಹಿಸಿ ಮಹಾರಾಷ್ಟ್ರದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾಳೆ. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಆಡಳಿತಾಧಿಕಾರಿ ಆನಂದ.ಎಸ್.ಟಿ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ಶೈಕ್ಷಣಿಕ ಸಲಹೆಗಾರ ರವೀಂದ್ರ ದರ್ಬೆ, ದೈಹಿಕ ಶಿಕ್ಷಕರಾದ ಪ್ರೇಮ ಹಾಗೂ ವಾಸಪ್ಪ ಮಾರ್ಗದರ್ಶನ ನೀಡಿದರು.