Latest News

64ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ
ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 64ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿOದ ಆಚರಿಸಲಾಯಿತು. ಶಾಲಾ ಆಡಳಿತಾಧಿಕಾರಿ ಆನಂದ್.ಎಸ್.ಟಿ. ಧ್ವಜಾಹರೋಣ ನೇರವೇರಿಸಿ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ವಿವರಿಸಿದರು. ಕನ್ನಡ ವಿಭಾಗದ ಶಿಕ್ಷಕಿ ಹರಿಣಿ ಹಾಗೂ ವಿದ್ಯಾರ್ಥಿ ಸಂಧ್ಯಾ ಕನ್ನಡ ರಾಜೋತ್ಸವ ಆಚರಣೆಯ ಕುರಿತಾದ ವಿಷಯಗಳನ್ನು ಮಂಡಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ‍್ಯಕ್ರಮ ನೇರವೇರಿತು. ನಂತರ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಕಾರ‍್ಯಕ್ರಮದಲ್ಲಿ ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ.ರೈ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ಶೈಕ್ಷಣಿಕ ಸಲಹೆಗಾರ ರವೀಂದ್ರ ಶೆಟ್ಟಿ ದರ್ಬೆ, ಪ್ರಾಥಮಿಕ ಪ್ರಭಾರ ಶಾಲಾ ಮುಖ್ಯಗುರು ಸುನಂದ, ಶಿಕ್ಷಕರು ಹಾಗೂ ಸಂಸ್ಥೆಯ ಸಿಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು. ಕಾರ‍್ಯಕ್ರವನ್ನು ಕನ್ನಡ ವಿಭಾಗದ ಶಿಕ್ಷಕ ಕಿಶೋರ್ ಕುಮಾರ್ ನಿರೂಪಿಸಿದರು.