Latest News

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ಶಾಲಾ ಮಂತ್ರಿಮಂಡಲದ ಉದ್ಘಾಟಣೆ
ದಿನಾಂಕ 22/07/2022ರಂದು ಶ್ರೀ ಚಂದ್ರಶೇಖರ್ ಪ್ರಾಂಶುಪಾಲರು ಪದವಿ ಪೂರ್ವ ಕಾಲೇಜು ರಾಮಕುಂಜ ಇವರು ಶಾಲಾ ಮಂತ್ರಿಮಂಡಲವನ್ನು ದೀಪ ಬೆಳಗಿಸಿ ಉದ್ಘಾಟಸಿದರು. ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸುವುದರ ಜೊತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಚೌಕಟ್ಟಿನಲ್ಲಿ ದೇಶದ ಉತ್ತಮ ಪ್ರಜೆಯಾಗಬೇಕೆಂದು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಕೆ ಸೇಸಪ್ಪ ರೈ ಇವರು ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿ ಸಂಘವು ಸಕ್ರಿಯವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಪ್ರತಿ ತಿಂಗಳು ಅಧಿವೇಶನ ನಡೆಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ನುಡಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಯುತ ಬಿ. ಎಲ್ ಜನಾರ್ದನರವರು ಮುಖ್ಯ ಅತಿಥಿಯಾಗಿ, ವಿದ್ಯಾರ್ಥಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿ ಸಂಸ್ಥೆಯ ಉನ್ನತಿಗೆ ಶ್ರಮಿಸಬೇಕು ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಯುತ ಆನಂದ ಎಸ್.ಟಿ ಉಪಸ್ಥಿತರಿದ್ದರು. ಶ್ರೀಮತಿ ಗಾಯತ್ರಿ ಯು ಎನ್ ಪ್ರೌಢಶಾಲಾ ಮುಖ್ಯಶಿಕ್ಷಕಿ ಇವರು ಸ್ವಾಗತಿಸಿ, ಶ್ರೀಮತಿ ಲೋಹಿತಾ ಎ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ವಂದನಾರ್ಪಣೆಗೈದರು. ಸಹಶಿಕ್ಷಕ ಶ್ರೀಯುತ ವಸಂತ್ ಕುಮಾರ್ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಭೋದಿಸಿದರು. ಸಹಶಿಕ್ಷಕ ಶ್ರೀಯುತ ರಾಧಕೃಷ್ಣ ಬಿ ಇವರು ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.