Latest News

2019-20ನೇ ಸಾಲಿನ ವಾರ್ಷಿಕ ಕ್ರೀಡಾಕೂಟ
ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ, ಶ್ರೀರಾಮಕುಂಜೇಶ್ವರ ವಿದ್ಯಾರ್ಥಿ ನಿಲಯ, ಹಿರಿಯ ವಿದ್ಯಾರ್ಥಿ ಸಂಘ, ಶಿಕ್ಷಕ-ರಕ್ಷಕ ಸಂಘ ಹಾಗೂ ಶ್ರೀರಾಮಕುಂಜೇಶ್ವರ ನೇತ್ರಾವತಿ ತುಳುಕೂಟ ವತಿಯಿಂದ 2019-20ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ನ.2ರಂದು ಶಾಲೆಯ ಕ್ರೀಡಾಂಗಣದಲ್ಲಿ ನಡೆಯಿತು.
ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯ ದೈಹಿಕ ಶಿಕ್ಷಕ ನಿರ್ದೇಶಕರು ಶರತ್.ಎನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದವರು ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಮಹತ್ವವಾಗಿದೆ. ಶಾಲಾ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಹೊರಹಾಕಬೇಕು. ಶಾಲಾ ಕ್ರೀಡೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಏರಲು ಸಾಧ್ಯ ಎಂದು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ ಪ್ರಾಸ್ತವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಜರುಗಿತು. ಅತಿಥಿಗಳು ಧ್ವಜವಂದನೆ ಸ್ವೀಕರಿಸಿದರು. ಶಾಲಾ ಕಾರ್ಯದರ್ಶಿಗಳು ಅತಿಥಿಗಳಿಗೆ ಕ್ರೀಡಾಪಟುಗಳನ್ನು ಪರಿಚಯಿಸಿದರು. ಶಾಲಾ ವಿದ್ಯಾರ್ಥಿ ನಾಯಕಿ ಪ್ರದಿತಿ.ರೈ.ಎಂ ಪ್ರತಿಜ್ಞಾ ವಿಧಿ ಭೋದಿಸಿದರು.
ವಿದ್ಯಾರ್ಥಿಗಳ ಹೆತ್ತವರಿಗೆ : ಹಗ್ಗಜಗ್ಗಾಟ, ಗುಂಡು ಎಸೆತ, ಲಗೋರಿ ಸ್ಪರ್ಧೆಗಳು.ಸ
ಹಿರಿಯ ವಿದ್ಯಾರ್ಥಿಗಳಿಗೆ : ವಾಲಿಬಾಲ್ , ಹಗ್ಗಜಗ್ಗಾಟ, ಗುಂಡೆಸೆತ, ಚಕ್ರ ಎಸೆತ ಹೀಗೆ ಪ್ರತ್ಯೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು
ವೇದಿಕೆಯಲ್ಲಿ ಶ್ರೀರಾ.ಆ.ಮಾ.ಪ್ರೌಢಶಾಲೆಯ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಬಾಬು ಪೂಜಾರಿ, ಆಡಳಿತಾಧಿಕಾರಿ ಆನಂದ.ಎಸ್.ಟಿ, ದೈಹಿಕ ಶಿಕ್ಷಕರಾದ ಪ್ರೇಮ ಹಾಗೂ ವಾಸಪ್ಪ, ಮ್ಯಾನೇಜರ್ ರಮೇಶ್.ರೈ.ಆರ್.ಬಿ, ಶಿಕ್ಷಕರು ಹಾಗೂ ಸಂಸ್ಥೆಯ ಸಿಬಂದಿ ವರ್ಗದವರು ಮೊದಲಾದವರು ಉಪಸ್ಥಿತರಿದ್ದರು. ಶೈಕ್ಷಣಿಕ ಸಲಹೆಗಾರ ರವೀಂದ್ರ ದರ್ಬೆ ಸ್ವಾಗತಿಸಿ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್ ವಂದಿಸಿದರು. ಶಿಕ್ಷಕ ರಾಧಕೃಷ್ಣ ನಿರೂಪಿಸಿದರು.