Latest News

ಚೆಸ್ ಸ್ಪರ್ಧೆ
ಪುತ್ತೂರು ತಾಲೂಕಿನ ಸರಕಾರಿ ಪ್ರೌಢಶಾಲೆ ಶಾಂತಿನಗರದಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನ ಬಾಲಕಿಯರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶುಭಪ್ರಧಾ ತೃತೀಯ ಸ್ಥಾನ ಪಡೆದಿದ್ದಾಳೆ. ಆಗಸ್ಟ್ 21ರಂದು ಸುಳ್ಯ ಸಂತ ಜೋಸೆಫರ್ಸ್ ಆಂ.ಮಾ.ಪ್ರೌ.ಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ ಪ್ರಕಟನೆಗೆ ತಿಳಿಸಿದ್ದಾರೆ.