Latest News

ಕು.ಶುಭಪ್ರದ ಚೆಸ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಮೂಡಬಿದಿರೆಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕು.ಶುಭಪ್ರದ(10ನೇ) ಪ್ರಥಮ ಸ್ಥಾನದೊಂದಿಗೆ ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ದೈಹಿಕ ಶೀಕ್ಷಕರಾದ ಪ್ರೇಮ ಹಾಗೂ ವಾಸಪ್ಪ ಮಾಗದರ್ಶನ ನೀಡಿದರು ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ ಅಭಿನಂದನೆ ಸಲ್ಲಿಸಿದರು.