Latest News

ಧನುಶ್.ಎಚ್.ಎಚ್ ಗೆ ರಾಷ್ಟ್ರಮಟ್ಟದಲ್ಲಿ ವೇಗದ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಧನುಶ್.ಎಚ್.ಎಚ್(10ನೇ) ರಾಜಸ್ಥಾನದ ನಾಗೂರುನಲ್ಲಿ ಅ.21ರಿಂದ 24ರ ವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಕ್ರೀಡಾಕೂಟದ ವೇಗದ ನಡಿಗೆ(ವಾಕ್ ರೇಸ್) ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿರುತ್ತಾನೆ. ದೈಹಿಕ ಶಿಕ್ಷಕರಾದ ಪ್ರೇಮ ಹಾಗೂ ವಾಸಪ್ಪ ತರಬೇತಿ ನೀಡಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಆಡಳಿತಾಧಿಕಾರಿ ಆನಂದ.ಎಸ್.ಟಿ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ಶೈಕ್ಷಣಿಕ ಸಲಹೆಗಾರ ರವೀಂದ್ರ ದರ್ಬೆ, ಶಿಕ್ಷಕರು ಮಾರ್ಗದರ್ಶನ ನೀಡಿದರು.