Latest News
ಕನಕ ಜಯಂತಿ ಆಚರಣೆ
ದಿನಾಂಕ 11/11/2022 ರಂದು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಕೆ ಸೇಸಪ್ಪ ರೈ ಯವರು ದೀಪ ಬೆಳಗಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಕನಕದಾಸರ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕನಕದಾಸರ ಕೀರ್ತನೆಗಳನ್ನು ಹಾಡಿದರು. ತಾಂತ್ರಿಕ ಸಲಹೆಗಾರರಾದ ಶ್ರೀ ಜಯೇಂದ್ರ ಬಿ ಹಾಗೂ ಸಹಶಿಕ್ಷಕಿ ಶ್ರೀಮತಿ ಶಶಿಕಲಾ ಕನಕದಾಸರ ಜೀವನ ಚರಿತ್ರೆಯನ್ನು ವಿವರಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಆನಂದ ಎಸ್ ಟಿ ಯವರು ಉಪಸ್ಥಿತರಿದ್ದರು.
ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕಿ ಶ್ರೀಮತಿ ಲೋಹಿತಾ ಎ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಶ್ರೀಮತಿ ಗಾಯತ್ರಿ ಯು ಎನ್ ರವರು ವಂದಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ಸಹಶಿಕ್ಷಕಿ ಶ್ರೀಮತಿ ಸೌಮ್ಯ ಕೆ ಕಾರ್ಯಕ್ರಮ ನಿರೂಪಿಸಿದರು.