Latest News

ಕೃಷ್ಣ, ರಾಧೆ ವೇಷಧಾರಿಯಲ್ಲಿ ಪುಟಾಣಿಗಳ ಕಲರವ
ಶ್ರೀಕೃಷ್ಣ, ನಂದ ಗೋಕುಲ, ಬಾಲಕೃಷ್ಣ, ಕಿಶೋರ ಕೃಷ್ಣ, ಕಂದ ಕೃಷ್ಣ, ಮುದ್ದು ಕೃಷ್ಣ, ತುಂಟ ಕೃಷ್ಣ, ದೇವಕಿ ಕೃಷ್ಣ, ಯಶೋಧ ಕೃಷ್ಣ, ಇವೆಲ್ಲವೂ ಕಂಡು ಬಂದಿದ್ದು, ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ಏರ್ಪಪಡಿಸಲಾಯಿತು.
ಕಾರ್ಯಕ್ರಮವನ್ನು ಮುದ್ದುಕೃಷ್ಣ ಕುಡಿಕೆಯಿಂದ ಬೆಣ್ಣೆ ತೆಗೆದು ತಿನ್ನುವುದರ ಮೂಲಕ ವಿಶೇಷ ರೀತಿಯಲ್ಲಿ ಉದ್ಘಾಟಿಸಲಾಯಿತು. ನಂತರ ಸಂಸ್ಥೆಯ ಕಾರ್ಯದರ್ಶಿ ಮಾತನಾಡಿ ಶ್ರೀಕೃಷ್ಣನ ಕುರಿತು ಮತ್ತು ಶ್ರೀಕೃಷ್ಣ ಜಗತ್ತಿಗೆ ನೀಡಿರುವ ಸಂದೇಶದ ಸಾರವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಪ್ರಯತ್ನ ನಮ್ಮದಾಗಿದೆ. ಭಾರತೀಯ ಸಂಸ್ಕøತಿ- ಸಂಸ್ಕಾರವನ್ನು ತಿಳಿಸುವ ಉದ್ದೇಶವಾಗಿದೆ ಎಂದು ಹೇಳಿದರು.
ಶ್ರೀಕೃಷ್ಣ ಜನ್ಮಾಷ್ಟಮಿಯ ವಿಶೇಷ : ವಿದ್ಯಾರ್ಥಿಗಳಿಗೆ ಮಡಕೆ ಒಡೆಯುವ ಸ್ಪರ್ಧೆ, ಮುದ್ದು ಕೃಷ್ಣ ವೇಷ ಸ್ಪರ್ಧೆ, ಶ್ರೀಕೃಷ್ಣ ಭಕ್ತಿಗೀತೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹೀಗೆ ವಿವಿಧ ರೀತಿಯ ಸ್ಪರ್ಧೆಗಳು ನಡೆಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದ ಶ್ರೀಕೃಷ್ಣ ಪುಟಾಣಿಗಳಿಗೆ ಪ್ರೊತ್ಸಾಹಕ ಬಹುಮಾನ ನೀಡಲಾಯಿತು.
ಕಾರ್ಯಕ್ರಮವನ್ನು ಶಿಕ್ಷಕಿರಾದ ಸರಿತಾ ಮತ್ತು ಶಾರದ ನಿರೂಪಿಸಿದರು. ಶಿಕ್ಷಕಿ ನಿಶ್ಮಾ ಸ್ವಾಗತಿಸಿ,ಶಾಲಾ ಮುಖ್ಯಗುರು ಲೋಹಿತಾ ವಂದಿಸಿದರು. ಪ್ರೌಢ ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ಆಡಳಿತಾಧಿಕಾರಿ ಆನಂದ್.ಎಸ್.ಟಿ., ಶಿಕ್ಷಕರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗ, ಪೋಷಕರು ಮೊದಲಾದವರು ಉಪಸ್ಥಿತರಿದ್ದರು.