Latest News

ರಾಷ್ಟ್ರೀಯ ಏಕತಾ ದಿವಸ ಆಚರಣೆ
ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು. ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್ ರಾಷ್ಟ್ರೀಯ ಏಕತಾ ದಿವಸದ ಕುರಿತಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಆಡಳಿತಾಧಿಕಾರಿ ಆನಂದ.ಎಸ್.ಟಿ, ಶೈಕ್ಷಣಿಕ ಸಲಹೆಗಾರ ರವೀಂದ್ರ ದರ್ಬೆ, ಶಿಕ್ಷಕರು ಹಾಗೂ ಸಂಸ್ಥೆಯ ಸಿಬಂದಿ ವರ್ಗದವರು ಮೊದಲಾದವರು ಉಪಸ್ಥಿತರಿದ್ದರು.