Latest News

PTA Meeting
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ರಾಮಕುಂಜ ಇಲ್ಲಿ ದಿನಾಂಕ 18/06/2022 ನೇ ಶನಿವಾರದಂದು ಶೈಕ್ಷಣಿಕ ವರ್ಷದ ಪ್ರಥಮ ಶಿಕ್ಷಕ-ರಕ್ಷಕ ಸಂಘದ ಸಭೆಯು ಶಾಲಾ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಮಾನ್ಯ ಕಾರ್ಯದರ್ಶಿಗಳಾದ ಶ್ರೀಯುತ ಸೇಸಪ್ಪ ರೈ ಕೆ ವಹಿಸಿದ್ದು, ಸಂಸ್ಥೆಯ ಶೈಕ್ಷಣಿಕ ಪ್ರಗತಿ ಹಾಗೂ ಪ್ರಸಕ್ತ ವರ್ಷದ ಯೋಜನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ ಶ್ರೀಯುತ ಗೋಪಾಲ ಶೆಟ್ಟಿ ಕಳೆಂಜ, ನಿವೃತ್ತ ದೈಹಿಕ ಶಿಕ್ಷಕರು ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ಇವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಹೆತ್ತವರ ಜವಾಬ್ದಾರಿಯನ್ನು ಮಾರ್ಮಿಕವಾಗಿ ತಿಳಿಸಿದರು. ಪ್ರಸಕ್ತ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಶಾಲಾ ಆಡಳಿತಾಧಿಕಾರಿಗಳಾದ ಶ್ರೀಯುತ ಆನಂದ್ ಎಸ್ ಟಿ ಯವರು ತಿಳಿಸಿದರು. ಸಂಸ್ಥೆಯಲ್ಲಿ ವಿಶೇಷವಾಗಿ ಪ್ರಾರಂಭಿಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಮಾಹಿತಿಯನ್ನು ಶ್ರೀಯುತ ಜಯೇಂದ್ರ ಇವರು ತಿಳಿಸಿದರು. ಸಭೆಯಲ್ಲಿ ನೂತನ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಶಿಕ್ಷಕ-ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಯುತ ಬಿ ಎಲ್ ಜನಾರ್ಧನ ಇವರು ಆಯ್ಕೆಗೊಂಡರು. ಹಾಗೂ ಉಪಾಧ್ಯಕ್ಷರಾಗಿ ಶ್ರೀಯುತ ಇಂದುಶೇಖರ್ ಶೆಟ್ಟಿ ಕುಕ್ಕೇರಿ ಆಯ್ಕೆಯಾದರು. ಇದೇÀ ಸಂದರ್ಭದಲ್ಲಿ ವಿಜಯ ಕರ್ನಾಟಕ ಪತ್ರಿಕೆಯವರು ಏರ್ಪಡಿಸಿದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆÀ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗಾಯತ್ರಿ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲೋಹಿತ ವಂದಿಸಿ, ಸಹಶಿಕ್ಷಕ ಶ್ರೀಯುತ ಹರೀಶ್ ಕಾರ್ಯಕ್ರಮ ನಿರೂಪಿಸಿದರು.
- B L JANARDHAN
- INDUSHEKHAR SHETTY