Latest News

ಸಂಕಲ್ಪ.ಬಿ.ಆರ್ ಪಂಜಾಬಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಸಾರ್ವಜನಿಕ ಶಿಕ್ಷಣ ಇಲಾಖಾ ಹಾಗೂ ಮಂಡ್ಯ ಬಾಲಗಂಗಾಧರನಾಥ ಸ್ವಾಮೀಜಿ ವಿದ್ಯಾ ಸಂಸ್ಥೆ ಆದಿಚುಂಚನಗಿರಿ ಬಿ.ಜಿ.ಎಸ್. ವಿದ್ಯಾ ಸಂಸ್ಥೆ ಇದರ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಕಲ್ಪ.ಬಿ.ಆರ್(10ನೇ) ಕೋಲು ಜಿಗಿತ(ಪೋಲ್ ವಾಲ್ಟ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಡಿಸೆಂಬರ್ ತಿಂಗಳಿನಲ್ಲಿ ಪಂಜಾಬಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಚಿಕ್ಕಮಂಗಳೂರು ಲಲಿತಾ.ಎಸ್.ಕೆ. ಮತ್ತು ರವಿನಾಥ್.ಬಿ.ಎ. ಇವರ ಸುಪುತ್ರನಾಗಿರುತ್ತಾನೆ.
ದೈಹಿಕ ಶಿಕ್ಷಕರಾದ ಪ್ರೇಮ ಹಾಗೂ ವಾಸಪ್ಪ ತರಬೇತಿ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ , ಆಡಳಿತಾಧಿಕಾರಿ ಆನಂದ.ಎಸ್.ಟಿ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ಶೈಕ್ಷಣಿಕ ಸಲಹೆಗಾರ ರವೀಂದ್ರ ಶೆಟ್ಟಿ ದರ್ಬೆ ಹಾಗೂ ಶಿಕ್ಷಕರು ಮಾರ್ಗದರ್ಶನ ನೀಡಿದರು.