Latest News

ತ್ರೋಬಾಲ್ ಪಂದ್ಯಾಟ ತಾಲೂಕು ಮಟ್ಟಕ್ಕೆ ಆಯ್ಕೆ
ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ / ಬಾಲಕಿಯರ ತ್ರೋಬಾಲ್ ಪಂದ್ಯಾಟವು ಓಂತ್ರಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ಜರುಗಿತು. ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕರ ತಂಡ ಭಾಗವಹಿಸಿ ದ್ವಿತೀಯ ಸ್ಥಾನದೊಂದಿಗೆ ಆಗಸ್ಟ್.28ರಂದು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇಲ್ಲಿ ಜರುಗುವ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಕರಾದ ವಾಸಪ್ಪ ಮತ್ತು ಪ್ರೇಮ ಇವರು ಮಾರ್ಗದರ್ಶನ ನೀಡಿದರು ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.