Contact : +91 9663 755 105 / sremramakunja@gmail.com

ಶ್ರೀರಾ.ಆಂ.ಮಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಶ್ರೀರಾಮಕುಂಜೇಶ್ವರ ಆ.ಮಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಆಡಳಿತಾಧಿಕಾರಿ ಆನಂದ.ಎಸ್.ಟಿ ಮಾತನಾಡಿ ಜವಾಹರಲಾಲ್ ನೆಹರು ಅವರ ತತ್ವ-ಆದರ್ಶಗಳನ್ನು ನಾವು ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳಾದ ಲಿಂಚನ, ಕೈವಲ್ಯ ಮಕ್ಕಳ ದಿನಾಚರಣೆಯ ಕುರಿತಾದ ವಿಷಯಗಳನ್ನು ಮಂಡಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ಪ್ರದೀತಿ ಸ್ವಾಗತಿಸಿ, ವಿದ್ಯಾರ್ಥಿ ವಿಭಾ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳ ದಿನಾಚರಣೆಯ ಅಂಗವಾಗಿ ಲಗೋರಿ, ಬಾಂಬ್ ಬ್ಲಾಸ್ಟ್ ಸರ್ಕಲ್ ಹಾಗೂ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ಶೈಕ್ಷಣಿಕ ಸಲಹೆಗಾರ ರವೀಂದ್ರ ದರ್ಬೆ, ಉಪನಾಯಕ ಜ್ಞಾನ್ ಹಾಗೂ ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು.

ಭಾರತದಲ್ಲಿ ಜವಾಹರಲಾಲ್ ನೆಹರುವರವರ ಹುಟ್ಟುಹಬ್ಬದಂದು (ನವೆಂಬರ್ 14 ರಂದು) ಆಚರಿಸಲಾಗುತ್ವಿಶ.