Contact : +91 9663 755 105 / sremramakunja@gmail.com

73ನೇ ಸ್ವಾತಂತ್ರೋತ್ಸವ ದಿನಾಚರಣೆ

ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ವತಿಯಿಂದ 73ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ವಿಜೃಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಆನಂದ ಪೂಜಾರಿ ಧ್ವಜಾರೋಹಣಗೈದರು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಗಳು ರಾಷ್ಟ್ರ ಭಕ್ತಿಯನ್ನು ಬೆಳೆಸಿಕೊಂಡು ವಿದ್ಯಾರ್ಥಿಯು ಭಾರತೀಯ ಸೇನೆಗೆ ಸೇರಿಕೊಳ್ಳುವ ಆಶಾಭಾವನೆ ಇಟ್ಟುಕೊಳ್ಳಬೇಕು. ತನ್ನ ದೇಶವನ್ನು ಪ್ರೀತಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯವಾಗಿದೆ ಎಂದು ಹೇಳಿದರು.

ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ 73ನೇ ಸ್ವಾತಂತ್ರೋತ್ಸವದ ಕುರಿತಾಗಿ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಸ್ವಾತಂತ್ರೋತ್ಸವದ ಅಂಗವಾಗಿ ನಡೆದ ವಿವಿಧ ಸಾಂಸ್ಕøತಿಕ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪ್ರದೀಪ್ ರೈ ಮನವಳಿಕೆ, ಜೊತೆ ಕಾರ್ಯದರ್ಶಿ ವಾಣಿ, ಸಂಸ್ಥೆಯ ಆಡಳಿತಾಧಿಕಾರಿ ಆನಂದ್.ಎಸ್.ಟಿ ಹಾಗೂ ಶಿಕ್ಷಕರು, ಸಂಸ್ಥೆಯ ಸಿಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್ ಸ್ವಾಗತಿಸಿ, ಪ್ರಾಥಮಿಕ ಶಿಕ್ಷಕಿ ಕವಿತಾ ವಂದಿಸಿದರು. ಪ್ರೌಢ ಶಾಲಾ ಶಿಕ್ಷಕಿ ಸೌಮ್ಯವತಿ ಕಾರ್ಯಕ್ರಮವನ್ನು ನಿರೂಪಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.