Contact : +91 9663 755 105 / sremramakunja@gmail.com

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಪ್ರಾತ್ಯಕ್ಷಿಕೆ ಮೂಲಕ ನಡೆಯಿತು. ಈ ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಯುತ ಕೆ ಸೇಸಪ್ಪ ರೈ ಇವರು ಉದ್ಘಾಟಿಸಿ ಹಬ್ಬದ ಆಚರಣೆಯ ಕುರಿತಾಗಿ ಕಿರು ಸಂದೇಶವನ್ನು ಮಕ್ಕಳಿಗೆ ನೀಡಿದರು. ಸಭೆಯಲ್ಲಿ ಆಡಳಿತಾಧಿಕಾರಿ ಶ್ರೀ ಆನಂದ ಎಸ್ ಟಿ, ಪ್ರೌಢಶಾಲೆಯ ಮುಖ್ಯಗುರುಗಳಾದ ಶ್ರೀಮತಿ ಗಾಯತ್ರಿ ಯು ಎನ್, ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಲೋಹಿತ ಕೆ, ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀ ರಮೇಶ್ ರೈ, ಕಾರ್ಯಕ್ರಮ ಸಂಘಟಕರಾದ ಶ್ರೀಮತಿ ಸರಿತಾ ಜನಾರ್ಧನ್ ಇವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 1 ರಿಂದ 3 ನೇ ತರಗತಿವರೆಗಿನ ಮಕ್ಕಳಿಗೆ ರಾಧಾ – ಕೃಷ್ಣ ವೇಷ ಸ್ಪರ್ಧೆ ಮತ್ತು 4 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಮೊಸರು ಕುಡಿಕೆ ಸ್ಪರ್ಧೆಯನ್ನು ನಡೆಸಲಾಯಿತು. ಶಿಕ್ಷಕರಾದ ಶ್ರೀ ಸುಬ್ರಮಣ್ಯ ಸಿ ಕೆ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.