Contact : +91 9663 755 105 / sremramakunja@gmail.com

ಶ್ರೀ.ರಾ.ಆಂ.ಮಾ.ಶಾಲೆಯಲ್ಲಿ ಪೇಜಾವರ ಶ್ರೀ ಆರಾಧನೋತ್ಸವ

ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರಾಧನೋತ್ಸವದ ಅಂಗವಾಗಿ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಜನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಹುಟ್ಟೂರು ರಾಮಕುಂಜಕ್ಕೆ ಅವರ ಕೊನೆಯ ಭೇಟಿಯಾದ ಸಂದರ್ಭ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ನೀಡಿದ ಆಶೀರ್ವಚನದ 3 ನಿಮಿಷದ ಆಡಿಯೋವನ್ನು ವಿದ್ಯಾರ್ಥಿಗಳಿಗೆ ಕೇಳಿಸಲಾಯಿತು. ಶಿಕ್ಷಕರು, ಸಿಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪೇಜಾವರ ಶ್ರೀಗಳ ಭಾವಚಿತ್ರಕ್ಕೆ ಪುಪ್ಪಾಂಜಲಿ ಅರ್ಪಿಸಿ ನಮನ ಸಲ್ಲಿಸಿದರು. ನಂತರ ಅನ್ನಸಂತರ್ಪಣೆ ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ಆಡಳಿತಾಧಿಕಾರಿ ಆನಂದ.ಎಸ್.ಟಿ, ಶೈಕ್ಷಣಿಕ ಸಲಹೆಗಾರ ರವೀಂದ್ರ ದರ್ಬೆ, ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಂಗ್ಲ ಭಾಷಾ ಶಿಕ್ಷಕ ರಾಧಾಕೃಷ್ಣ .ಆರ್.ಕೆ ನಿರೂಪಿಸಿದರು.