Contact : +91 9663 755 105 / sremramakunja@gmail.com

ಶಿಕ್ಷಕರ ದಿನಾಚರಣೆ

ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ರಾಮಕುಂಜ ಇಲ್ಲಿಯ ಶಾಲಾ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದರು.

 

ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ದೀಪ ಬೆಳಗಿಸಿ ಉದ್ಘಾಟಿಸಿ ಪ್ರಸ್ತುತವಾಗಿ ವಿದ್ಯಾರ್ಥಿಗಳಿಗೆ ಗುರುಕುಲ ಮಾದರಿಯ ಶಿಕ್ಷಣ ಅಗತ್ಯ. ಎಲ್ಲ ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸುವ ಮೂಲಕ ಗುರು-ಸ್ಥಾನ ಲಭಿಸುವುದು ಎಂದು ಹೇಳಿದರು.

 

ಸಂಸ್ಥೆಯ ಶಿಕ್ಷಣ ಸಲಹೆಗಾರ (ಏಜುಕೇಶನ್ ಅಡ್ವೈಸರ್) ರವೀಂದ್ರ ಶೆಟ್ಟಿ.ಡಿ. ಮಾತನಾಡಿ ಜಾಗತೀಕರಣ ಮುಂದುವರಿದಂತೆ ಶಿಕ್ಷಣದಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ. ವಿದ್ಯಾರ್ಥಿಗಳು ತಮ್ಮ ಕಲಿಕ ಭಾಷೆಗೆ ಹೆಚ್ಚು ಒತ್ತು ನೀಡಬೇಕು ಎಂದರು.
ವಿದ್ಯಾರ್ಥಿ ನಿಲಯದ ನಿಯಮ ಪಾಲಕಿ ರಮ್ಯ.ರೈ ಹಾಗೂ ವಿದ್ಯಾರ್ಥಿನಿ ಕು.ಶುಭಪ್ರದಾ ಶಿಕ್ಷಕರ ದಿನಾಚರಣೆಯ ಮಹತ್ವಗಳ ಬಗ್ಗೆ ವಿಚಾರ ತಿಳಿಸಿದರು.

 

ಸ್ಪರ್ಧೆಗಳು: ಸಂಗೀತ ಕುರ್ಚಿ, ಲಿಂಬೆ ಚಮಚ ಓಟ, ಹಗ್ಗ-ಜಗ್ಗಾಟ ಹೀಗೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಕರಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಯಿತು.

 

ವೇದಿಕೆಯಲ್ಲಿ ಆಡಳಿತಾಧಿಕಾರಿ ಆನಂದ್.ಎಸ್.ಟಿ, ಪ್ರೌ.ಶಾಲೆಯ ಮುಖ್ಯಗುರು ಗಾಯತ್ರಿ.ಯು.ಎನ್, ಶಿಕ್ಷಕರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಎಂ.ಪ್ರದಿತಿ.ರೈ ಕಾರ್ಯಕ್ರಮ ನಿರೂಪಿಸಿದರು.