Latest News

Yoga Day
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ರಾಮಕುಂಜ ಇಲ್ಲಿ 8ನೇ “ಅಂತರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಮಾನವತೆಗಾಗಿ ಯೋಗ ಎಂಬ ಧ್ಯೇಯದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ ಇವರ ಸಹಯೋಗದಲ್ಲಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ ಉಜಿರೆ ಇದರ ಬಯೋ ಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥರಾದ ಡಾ. ಬಾಲಕೃಷ್ಣ ಶೆಟ್ಟಿ ಮತ್ತು ಪ್ರೊಫೆಸರ್ ಆಗಿರುವ ಗೀತಾ ಬಿ ಶೆಟ್ಟಿ, ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಕೆ. ಸೇಸಪ್ಪ ರೈ ಉಪಸ್ಥಿತರಿದ್ದರು. ಯೋಗ ಗುರು ಡಾ. ಕಾಡ ಗೌಡ ಇವರ ನೇತೃತ್ವದಲ್ಲಿ ವಿವಿಧ ಯೋಗಾಸನಗಳನ್ನು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕ-ಶಿಕ್ಷಕೇತರ ವರ್ಗದವರಿಂದ ನಡೆಸಲಾಯಿತು.